ನವದೆಹಲಿ: ವಿಮಾನದೊಳಗೆ ಫೋಟೋ ತೆಗೆದಿರುವ ಪ್ರಕರಣವನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಂಭೀರವಾಗಿ ಪರಿಗಣಿಸಿದೆ. ಇನ್ನು ಮುಂದೆ ಇಂತಹ ಪ್ರಕರಣ ವರದಿಯಾದರೆ ಎರಡು ವಾರಗಳ ಕಾಲ ವಿಮಾನ ಹಾರಟದ ಮೇಲೆ ನಿರ್ಬಂಧ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಕಂಗನಾ ರಣಾವತ್, ಮುಂಬೈಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ಪತ್ರಕರ್ತರು ಅವರು ಪ್ರಯಾಣಿಸುತ್ತಿದ್ದ ವಿಮಾನದೊಳಗೆ ನುಗ್ಗಿ ಸಂದರ್ಶನ ಮಾಡಿದ್ದರು. ಫೋಟೊ ತೆಗೆದಿದ್ದರು. ಇದು ದೇಶಾದ್ಯಂತ ಚರ್ಚೆಯನ್ನು ಹುಟ್ಟು ಹಾಕಿತ್ತು. ಇದೀಗ ಈ ಪ್ರವೃತ್ತಿಗೆ ಕಡಿವಾಣ ಹಾಕಲು ಡಿಜಿಸಿಎ ಮುಂದಾಗಿದೆ.
ಎಲ್ಲ ವಿಮಾನಯಾನ ಸಂಸ್ಥೆಗಳು ಈ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಡಿಜಿಸಿಎ ಸೂಚಿಸಿದೆ.