ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಇ ಕೆ ಪಳನಿಸ್ವಾಮಿ ರೈತನಾಗಿ ಕೆಲಸ ಮಾಡುತ್ತಿರುವ ಪೋಟೊ ಒಂದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್ ಮಾಡಿದ್ದಾರೆ. ಇದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಪಳನಿ ಸ್ವಾಮಿ ಅವರ ಕೆಲಸ ಒಂದು ದ್ಯೋತಕ ಮಾತ್ರವಾಗಿರಬಹುದು. ಆದರೂ ಇದು ಹಲವರಿಗೆ ಸ್ಪೂರ್ತಿ ನೀಡಲಿದೆ. ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಲು ಎಲ್ಲರೂ ಈ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.