Saturday, April 17, 2021

ತಮಿಳ್ನಾಡು; ಒಂದೇ ದಿನ 3949 ಮಂದಿಗೆ ಕೊರೋನಾ, 62 ಜನ ಸಾವು

ನವದೆಹಲಿ: ತಮಿಳುನಾಡಿನಲ್ಲಿ ಸೋಮವಾರ ಒಂದೇ ದಿನ 3949 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. 62 ಜನ ಮೃತಪಟ್ಟಿದ್ದಾರೆ ಎಂದು ತಮಿಳುನಾಡು ಆರೋಗ್ಯ ಸಚಿವಾಲಯ ತಿಳಿಸಿದೆ.
ತಮಿಳುನಾಡಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 86224ಕ್ಕೆ ಏರಿಕೆಯಾಗಿದೆ. 47749 ಮಂದಿ ಗುಣಮುಖರಾಗಿದ್ದರೆ 1141 ಸಾವು ಸಂಭವಿಸಿದೆ. 37331 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರದಲ್ಲಿ 5257 ಪ್ರಕರಣಗಳು ಸೋಮವಾರ ದೃಢಪಟ್ಟಿದ್ದು, 181 ಸಾವು ಸಂಭವಿಸಿದೆ. ಹಿಮಾಚಲ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 919 ತಲುಪಿದೆ. 363 ಸಕ್ರಿಯ ಪ್ರಕರಣಗಳಿದ್ದು, 536 ಮಂದಿ ಚೇತರಿಸಿಕೊಂಡಿದ್ದಾರೆ. 7 ಮಂದಿ ಈವರೆಗೆ ಮೃತಪಟ್ಟಿದ್ದಾರೆ.
ಕೇರಳದಲ್ಲಿ 121 ಪ್ರಕರಣಗಳು ಇಂದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4311ಕ್ಕೆ ಏರಿಕೆಯಾಗಿದೆ. ಸದ್ಯ 2057 ಸಕ್ರಿಯ ಪ್ರಕರಣಗಳಿವೆ ಎಂದು ಮುಖ್ಯಮತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಬಿಹಾರದಲ್ಲಿ 282 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 9506ಕ್ಕೆ ಏರಿಕೆಯಾಗಿದೆ. ಪಂಜಾಬ್‌ನಲ್ಲಿ 202 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 5418 ತಲುಪಿದೆ. ಸಾವಿನ ಸಂಖ್ಯೆ 138ಕ್ಕೆ ಏರಿಕೆಯಾಗಿದೆ. ಉತ್ತಾರಖಂಡದಲ್ಲಿ 8 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2831ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!