newsics.com
ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪೆಟ್ರೋಲ್ ಬಂಕ್ ಹೊರಗಡೆ ನಿಲ್ಲಿಸಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ತ಼಼ಡರಾತ್ರಿ ಢಾಬದಲ್ಲಿ ಊಟ ಮುಗಿಸಿ ವಿದ್ಯಾರ್ಥಿಗಳು ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕಾರು ಅತೀ ವೇಗದಲ್ಲಿ ಚಲಿಸುತ್ತಿತ್ತು . ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜು ಗುಜ್ಜಾಗಿದೆ.
ಕಳೆದ ತಿಂಗಳು ರಾಯಚೂರಿನಲ್ಲಿ ಕೂಡ ಇದೇ ರೀತಿಯ ಘಟನೆ ಸಂಭವಿಸಿತ್ತು. ಊಟ ಮುಗಿಸಿ ಕಾರಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಅಪಘಾತಕ್ಕೆ ಗುರಿಯಾಗಿತ್ತು.