Monday, April 12, 2021

ಚಹಾ ಮಾರುವವನ ಪುತ್ರಿ ಈಗ ಫ್ಲೈಯಿಂಗ್ ಆಫೀಸರ್!

ನವದೆಹಲಿ: ಛಲವೊಂದಿದ್ದರೆ ಏನಾದರೂ ಸಧ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚಹಾ ಮಾರುವವನ ಪುತ್ರಿ ಈಗ ಭಾರತದ ಫ್ಲೈಯಿಂಗ್ ಆಫೀಸರ್!
ಮೊದಲ ಸ್ಥಾನದೊಂದಿಗೆ ಭಾರತೀಯ ವಾಯುಪಡೆ ಅಕಾಡೆಮಿಯಿಂದ ಫ್ಲೈಯಿಂಗ್ ಆಫೀಸರ್ ಆಗಿ ಆಂಚಲ್ ಗಂಗ್ವಾಲ್ ನೇಮಕಗೊಂಡಿದ್ದಾರೆ. ಆಂಚಲ್‌ಗೆ ರಾಷ್ಟ್ರಪತಿಗಳ ಫಲಕವನ್ನು ಈಗಾಗಲೇ ಪ್ರದಾನಿಸಲಾಗಿದೆ.
ಆಂಚಲ್ ಗಂಗ್ವಾಲ್, ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ಚಹಾ ಮಾರಾಟ ಮಾಡುತ್ತಿರುವ ಸುರೇಶ್ ಗಂಗ್ವಾಲ್ ಅವರ ಪುತ್ರಿ. ನೀಮಚ್‌ನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಪದವಿ ಪಡೆದ ಬಳಿಕ ಆಂಚಲ್ ಮಧ್ಯಪ್ರದೇಶ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿದ್ದರು. ಬಳಿಕ ಪರೀಕ್ಷೆ ಬರೆದು ಲೇಬರ್ ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾದಾಗ ಎಸ್‌ಐ ಹುದ್ದೆಗೆ ರಾಜೀನಾಮೆ ನೀಡಿದ್ದರು. ವಾಯುಪಡೆಗೆ ಸೇರುವ ಮುನ್ನ ಎಂಟು ತಿಂಗಳು ಅವರು ಲೇಬರ್ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಇಂಜಿನಿಯರಿಂಗ್ ಪದವಿ ಮುಗಿಸಿದಾಗಿನಿಂದಲೇ ಆಂಚಲ್ ವಾಯುಪಡೆ ಸಾಮಾನ್ಯ ಪ್ರವೇಶ ಪರೀಕ್ಷೆ (ಎಎಫ್‌ಸಿಎಟಿ)ಗೆ ಹಾಜರಾಗಲು ಆರಂಭಿಸಿದ್ದು, ಆರನೇ ಪ್ರಯತ್ನದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಯಶಸ್ಸು ಸಾಧಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!