Saturday, April 17, 2021

ತೆಲಂಗಾಣ: ಕೊಳವೆಬಾವಿಗೆ ಬಿದ್ದಿದ್ದ ಮಗು ಸಾವು

ಮೇದಕ್(ತೆಲಂಗಾಣ): ಜಿಲ್ಲೆಯ ಪಾಪಣ್ಣಪೇಟೆ ಹೋಬಳಿಯ ಪೊಡಿಚನ್ ಪಲ್ಲಿ ಗ್ರಾಮದಲ್ಲಿ ಬುಧವಾರ ಕೊಳವೆಬಾವಿಗೆ ಬಿದ್ದಿದ್ದ ಮಗು ಸಂಜಯ್ ಸಾಯಿವರ್ಧನ್ ಮೃತಪಟ್ಟಿದ್ದಾನೆ.
ಬಾಲಕನ ಶವ 25 ಅಡಿ ಆಳದಲ್ಲಿ ಪತ್ತೆಯಾಗಿದೆ. ಮೂರು ವರ್ಷದ ಬಾಲಕ ಬುಧವಾರ ಸಂಜೆ ತನ್ನ ಅಜ್ಜನೊಂದಿಗೆ ತೋಟದ ಮನೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕೊಳವೆ ಬಾಯಿಯಲ್ಲಿ ಬಿದ್ದಿದ್ದ.
ಬಾಲಕನನ್ನು ರಕ್ಷಿಸಲು ಅಧಿಕಾರಿಗಳು ಸಾಕಷ್ಟು ಪ್ರಯತ್ನಿಸಿದ್ದರು. ಆದರೆ ಎಲ್ಲರ ಶ್ರಮ ಮತ್ತು ಪ್ರಾರ್ಥನೆ ಫಲಿಸಲಿಲ್ಲ. ರಕ್ಷಣಾ ಕಾರ್ಯಾಚರಣೆ ಸುಮಾರು 12 ಗಂಟೆ ಕಾಲ ನಡೆದರೂ ಮಗು ಬದುಕಿ ಬರಲಿಲ್ಲ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!