Tuesday, April 13, 2021

ಕಿರುತೆರೆ ನಟ ಮನ್ಮೀತ್ ಗ್ರೆವಾಲ್ ಆತ್ಮಹತ್ಯೆ

ಮುಂಬೈ: ಕಿರುತೆರೆ ನಟ, ಪಂಜಾಬ್ ಮೂಲದ ಮನ್ಮೀತ್ ಗ್ರೆವಾಲ್ (32) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ ಖಾರ್‌ಘರ್‌ನಲ್ಲಿಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರೆವಾಲ್ ‘ಆದತ್ ಸೆ ಮಜಬೂರ್ ‘ ಮತ್ತು ‘ಕುಲದೀಪಕ್’ನಂತಹ ಟಿವಿ ಶೋಗಳಲ್ಲಿ ಕಾರ್ಯನಿರ್ವಹಿಸಿದ್ದರು.
ಗ್ರೆವಾಲ್ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರು ಮತ್ತು ಲಾಕ್‌ಡೌನ್‌ನಿಂದಾಗಿ ಅವರ ಗಳಿಕೆಯೂ ನಿಂತುಹೋಗಿತ್ತು. ಆದಾಯವಿಲ್ಲದೆ ಸಾಲ ಮರುಪಾವತಿ ಸಾಧ್ಯವಾಗದೆ ಇನ್ನಷ್ಟು ಒತ್ತಡದಲ್ಲಿದ್ದ ಅವರು ಖಿನ್ನತೆಗೆ ಒಳಗಾಗಿದ್ದರು. ಗ್ರೆವಾಲ್ ವೆಬ್-ಸಿರೀಸ್ ಮತ್ತು ಕೆಲವು ಜಾಹೀರಾತುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!