ಲಖನೌ: ಯಾವುದೇ ಸಂದರ್ಭದಲ್ಲೂ ಅಯೋಧ್ಯೆಯಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ದಳ ಎಚ್ಚರಿಸಿದೆ. ಈ ಎಚ್ಚರಿಕೆ ಹಿನ್ನೆಲೆಯಲ್ಲಿ ಪೊಲೀಸರು ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಪಾಕಿಸ್ತಾನ ಮೂಲದ ಜೈಷ್ ಎ ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಯೋಧ್ಯೆಯಲ್ಲಿ ನಾಲ್ಕು ತಿಂಗಳಲ್ಲಿ ರಾಮಮಂದಿರ ನಿರ್ಮಾಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ ಬೆನ್ನಲ್ಲೇ ಈ ದಾಳಿಯ ಎಚ್ಚರಿಕೆ ಲಭ್ಯವಾಗಿದೆ.
ಗೋರಖಪುರದಲ್ಲಿ ಉಗ್ರರು ನೆಲೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಪ್ರಭಾವಿಗಳ ನೆರವೂ ಇವರಿಗೆ ಇಡೇ ಎಂದು ಗುಪ್ತಚರ ದಳದ ಮಾಹಿತಿ ನೀಡಿದೆ. ಜೆಇಎಂ ಮುಖ್ಯಸ್ಥ ಮಸೂದ್ ಅಜರ್, ಅಯೋಧ್ಯೆಯಲ್ಲಿ ಉಗ್ರ ದಾಳಿ ನಡೆಸುವಂತೆ ಸಹಚರರಿಗೆ ಕರೆ ನೀಡಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ಅಯೋಧ್ಯೆಯಲ್ಲಿ ಉಗ್ರರ ದಾಳಿ ಸಾಧ್ಯತೆ
Follow Us