Monday, April 12, 2021

ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ದಾಳಿ: ಒರ್ವ ಯೋಧ ಹುತಾತ್ಮ

ಶ್ರೀನಗರ:  ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರಿಜ್ ಬೆಹ್ರಾ ಎಂಬಲ್ಲಿ ಹೆದ್ದಾರಿ ಗಸ್ತು ನಡೆಸುತ್ತಿದ್ದ ಸಿಆರ್ ಪಿಎಫ್ ಯೋಧರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಸಿಆರ್ ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಉಗ್ರರ ಗುಂಡಿನ ದಾಳಿಯಲ್ಲಿ   ಆರು ವರ್ಷದ ಬಾಲಕನೊಬ್ಬ ಕೂಡ ಮೃತಪಟ್ಟಿದ್ದಾನೆ, ಮೋಟಾರ್ ಸೈಕಲ್ ನಲ್ಲಿ ಬಂದ ಇಬ್ಬರು ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದರು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.. ಜಮ್ಮು ಕಾಶ್ಮೀರದಾದ್ಯಂತ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಉಗ್ರರು ಈ ಮಿಂಚಿನ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ. ಇಂದು ಕೂಡ ಪುಲ್ವಾಮದಲ್ಲಿ ಭದ್ರತಾಪಡೆ ಮೂವರು ಭಯೋತ್ಪಾದಕರನ್ನು ಯಮಪುರಿಗೆ ಅಟ್ಟಿತ್ತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!