Tuesday, April 13, 2021

ಸೋಪೋರ್ ನಲ್ಲಿ ಉಗ್ರರ ದಾಳಿ: ಸಿಆರ್ ಪಿಎಫ್ ಯೋಧ ಹುತಾತ್ಮ, ಮಗು ರಕ್ಷಣೆ

ಶ್ರೀನಗರ:  ಜಮ್ಮು ಕಾಶ್ಮೀರದ ಸೋಪೋರ್ ನಲ್ಲಿ ಭಯೋತ್ಪಾದಕರು ಸಿಆರ್ ಪಿಎಫ್ ಯೋಧರ ತಂಡದ ಮೇಲೆ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸಿಆರ್ ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ನಾಗರಿಕರೊಬ್ಬರು ಕೂಡ ಗುಂಡಿನ ದಾಳಿಯಿಂದ ಮೃತಪಟ್ಟಿದ್ದಾರೆ. ಗಸ್ತು ನಡೆಸುತ್ತಿದ್ದ ಯೋಧರ ಮೇಲೆ ಉಗ್ರರು ದಿಢೀರ್ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಸೋಪೋರ್ ನಲ್ಲಿ ಉಗ್ರರಿಗಾಗಿನ ಶೋಧ ಮುಂದುವರಿದಿದೆ. ಉಗ್ರರ ದಾಳಿ ಸಂದರ್ಭದಲ್ಲಿ  ಅಪ್ರತಿಮ ಸಾಹಸ ಪ್ರದರ್ಶಿಸಿದ ಯೋಧರು ಮಗುವೊಂದನ್ನು ಗುಂಡಿನ ದಾಳಿಯಿಂದ ರಕ್ಷಿಸಿದ್ದಾರೆ. ಯೋಧರ ಈ ಸಾಹಸಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

ಈ ಮಧ್ಯೆ ಜಮ್ಮು ಕಾಶ್ಮೀರದ ರಜೌರಿ ವಲಯದ ಕೇರಿ ಎಂಬಲ್ಲಿ  ಭಾರತಕ್ಕೆ ನುಸುಳಲು ಉಗ್ರರು ನಡೆಸಿದ ಯತ್ನವನ್ನು ವಿಫಲಗೊಳಿಸಲಾಗಿದೆ. ಇಂದು ಮುಂಜಾನೆ 5.55ರ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕೆಲವು ಭಯೋತ್ಪಾದಕರು ಭಾರತಕ್ಕೆ ನುಸುಳಲು ಯತ್ನಿಸಿದಾಗ ಯೋಧರು ಗುಂಡು ಹಾರಿಸಿದರು. ಗುಂಡಿನ ಚಕಮಕಿಯಲ್ಲಿ  ಉಗ್ರನೊಬ್ಬ ಹತನಾಗಿದ್ದಾನೆ. ಉಳಿದ ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!