Monday, April 12, 2021

ಕಾರ್ ಬಾಂಬ್ ಸ್ಫೋಟಿಸಿ 400ಕ್ಕೂ ಹೆಚ್ಚು ಯೋಧರ ಹತ್ಯೆಗೆ ಉಗ್ರರ ಸಂಚು ವಿಫಲ

ಶ್ರೀನಗರ: ಪುಲ್ವಾಮಾದಲ್ಲಿ ಸಿಆರ್ಪಿಎಫ್ ನ 400 ಕ್ಕೂ ಹೆಚ್ಚು ಯೋಧರನ್ನು ಬಲಿ ಪಡೆಯುವುದು ಉಗ್ರರ ಉದ್ದೇಶವಾಗಿತ್ತು ಎಂದು ಭದ್ರತಾಪಡೆ ಮೂಲಗಳು ತಿಳಿಸಿವೆ.
ಮೇಡ್ ಇನ್ ಪಾಕಿಸ್ತಾನ್ ಕಾರು ಬಾಂಬ್ ಸ್ಫೋಟಿಸಿ ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈಯಲು ಉಗ್ರರು ರೂಪಿಸಿದ್ದ ಸಂಚನ್ನು ಭದ್ರತಾ ಪಡೆಗಳು ವಿಫಲಗೊಳಿಸಿ, ತನಿಖೆ ಕೈಗೊಂಡ ಹಿನ್ನೆಲೆಯಲ್ಲಿ ಈ ಮಾಹಿತಿ ಬೆಳಕಿಗೆ ಬಂದಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ವಶಪಡಿಸಿಕೊಂಡಿದ್ದ 60 ಕೆ.ಜಿ. ಸ್ಫೋಟಕವಿದ್ದ ಕಾರನ್ನು ಭದ್ರತಾಪಡೆ ಸಿಬ್ಬಂದಿ ವಶಪಡಿಸಿಕೊಂಡಿದ್ದರು.
ಗುರುವಾರ ಬೆಳಗ್ಗೆ ಭಕ್ಷಿ ಸ್ಟೇಡಿಯಂ ಕ್ಯಾಂಪ್’ನಿಂದ ಜಮ್ಮುಗೆ ತೆರಳಲಿದ್ದ ಸಿಆರ್ಪಿಎಫ್ ಯೋಧರ ಮೇಲೆ ದಾಳಿ ನಡೆಸಲು
ಜೈಷ್ ಎ ಮೊಹಮ್ಮದ್ ಭಯೋತ್ಪಾದನಾ ಸಂಘಟನೆಯ ಉದ್ದೇಶವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!