Monday, November 29, 2021

ಬಾಲ್ ಕೋಟ್ ವೈಮಾನಿಕ ದಾಳಿ ಪಾಕಿಸ್ತಾನಕ್ಕೆ ನೀಡಿದ ಎಚ್ಚರಿಕೆ ಎಂದ ರಾವತ್

Follow Us

ನವದೆಹಲಿ:  ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕರ ತರಬೇತಿ ಕೇಂದ್ರಗಳ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿ ಬಳಿಕ ಪಾಕಿಸ್ತಾನದ ಎಲ್ಲ  ಕಾರ್ಯತಂತ್ರ ಬುಡಮೇಲಾಯಿತು ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅಭಿಪ್ರಾಯಪಟ್ಟಿದ್ದಾರೆ.  ನವದೆಹಲಿಯಲ್ಲಿ ವಾಯು ರಕ್ಷಣಾ ವ್ಯವಸ್ಥೆ ಕುರಿತು ಆಯೋಜಿಸಲಾದ ವಿಚಾರಗೋಷ್ಠಿಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತ ತನ್ನ ಗಡಿ ಉಲ್ಲಂಘಿಸಿ ದಾಳಿ ನಡೆಸುವ ಸಾಧ್ಯತೆ ಇಲ್ಲ ಎಂದು ಪಾಕಿಸ್ತಾನ ಬಲವಾಗಿ ನಂಬಿತ್ತು. ಆದರೆ ಭಾರತದ ವೈಮಾನಿಕ ದಾಳಿ ಪಾಕಿಸ್ತಾನವನ್ನು  ನಿಬ್ಬೆರಗುಗೊಳಿಸಿತು ಎಂದು ರಾವತ್ ಹೇಳಿದರು. ಭಾರತ, ತನ್ನ ರಕ್ಷಣಾ ಹಿತಾಸಕ್ತಿ ಕಾಪಾಡಲು ಯಾವುದೇ ಕ್ರಮಕ್ಕೂ ಹಿಂಜರಿಯದು ಎಂಬುದಕ್ಕೆ ಈ ದಾಳಿಯೇ ಸೂಕ್ತ ನಿದರ್ಶನ ಎಂದು ರಾವತ್  ಅಭಿಪ್ರಾಯಪಟ್ಟರು.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!