ಅಹಮದಾಬಾದ್: ಕೊರೋನಾ ಸೋಂಕಿನಿಂದ ಗುಣಮುಖರಾದ ಸೂರತ್’ನ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ತಮ್ಮ ಕಚೇರಿಯನ್ನೇ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಿದ್ದಾರೆ.
ಸೂರತ್’ನ ಉದ್ಯಮಿ ಖಾದರ್ ಶೇಕ್ ಅವರ ಕಚೇರಿ ಈಗ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಯಾಗಿದೆ. ಇಲ್ಲಿ 85 ಹಾಸಿಗೆಗಳು ಇದ್ದು, ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಘೋಷಿಸಿದ್ದಾರೆ.
ಖಾದರ್ ಶೇಕ್ ಅವರಿಗೆ ಕೆಲ ದಿನಗಳ ಹಿಂದೆ ಕೊರೋನಾ ವೈರಸ್ ಸೋಂಕು ತಗುಲಿತ್ತು. ಸರ್ಕಾರಿ ಆಸ್ಪತ್ರೆಗಳಲ್ಲಿ ಅವರಿಗೆ ದಾಖಲಾತಿ ಸಿಗಲಿಲ್ಲ. ಕೊನೆಗೆ ಖಾಸಗಿ ಆಸ್ಪತ್ರೆಗೆ ದಾಖಲಾದರು. 20 ದಿನಗಳ ಕಾಲ ಚಿಕಿತ್ಸೆ ಪಡೆದು ಅವರು ಗುಣಮುಖಗೊಂಡಿದ್ದಾರೆ.
ಕೊರೋನಾ ಸೋಂಕು ತಗುಲಿದ್ದ ಜಗತ್ತಿನ ಮೊದಲ ನಾಯಿ ಸಾವು!
ಗುಜರಾತ್ನಲ್ಲಿ 60,285 ಮಂದಿ ಕೊರೋನಾ ಸೋಂಕಿತರಿದ್ದು, ಸೂರತ್ನಲ್ಲಿ ಒಟ್ಟು 12,785 ಸೋಂಕಿತರಿದ್ದಾರೆ. ಒಟ್ಟು 400 ಜನ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.