newsics.com
ಲಖನೌ: ಹತ್ರಾಸ್ ಅತ್ಯಾಚಾರ ಪ್ರಕರಣದ ಪ್ರಾಥಮಿಕ ತನಿಖಾ ವರದಿ ಆಧರಿಸಿ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಕೆಲ ಪೊಲೀಸ್ ಸಿಬ್ಬಂದಿಯನ್ನು ಉತ್ತರಪ್ರದೇಶ ಸರ್ಕಾರ ಅಮಾನತುಗೊಳಿಸಿದೆ.
ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಎಸ್ಪಿ, ಉಪ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್ಪೆಕ್ಟರ್ ಮತ್ತಿತರ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಎಸ್ಪಿ ಮತ್ತು ಡಿಎಸ್ಪಿಯ ನಾರ್ಕೊ ಪಾಲಿಗ್ರಾಫ್ ಪರೀಕ್ಷೆಗಳನ್ನು ಸಹ ನಡೆಸಲಾಗುವುದು ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ. ಹತ್ರಾಸ್’ನಲ್ಲಿ ನಡೆದ 19 ವರ್ಷದ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೈದ ಆರೋಪದ ವಿರುದ್ಧ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ಬಳಿಕ ಉತ್ತರ ಪ್ರದೇಶ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಮಧ್ಯೆ, ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿ ಹಲವು ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು.
ಹತ್ರಾಸ್ ಕೇಸ್; ಎಸ್ಪಿ, ಡಿಎಸ್ಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳ ಅಮಾನತು
Follow Us