Wednesday, May 25, 2022

ಗಾಯಕ ಎಸ್ಪಿಬಿ ಆರೋಗ್ಯ ಮತ್ತಷ್ಟು ಚಿಂತಾಜನಕ

Follow Us

newsics.com
ಚೆನ್ನೈ: ಜನಪ್ರಿಯ ಗಾಯಕ ಡಾ.ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಮೂಲಗಳು ತಿಳಿಸಿವೆ.
ಕೊರೋನಾ ಸೋಂಕು ಹಾಗೂ ಶ್ವಾಸಕೋಶ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ಎಸ್ಪಿಬಿ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಈ ಮಧ್ಯೆ, ನಟ ಕಮಲ್ ಹಾಸನ್ ಅವರು ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿದ್ದು, ಬಾಲಸುಬ್ರಮಣ್ಯಂ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಮಲ್, ‘ಎಸ್ಪಿಬಿ ಚೆನ್ನಾಗಿದ್ದಾರೆಂದು ಹೇಳಲಾಗದು. ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ’ ಎಂದು ಹೇಳಿದ್ದಾರೆ.
ಆಗಸ್ಟ್ 5 ರಂದು ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ತಜ್ಞ ವೈದ್ಯರವುಗಳು ನಿರಂತರ ಚಿಕಿತ್ಸೆ ನೀಡುತ್ತಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಆರೋಗ್ಯ ಸುಧಾರಣೆಯಾಗಿಲ್ಲ. ಕಳೆದ 24 ಗಂಟೆಯಲ್ಲಿ ಎಸ್ ಪಿ ಬಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಮೂಲಗಳು ತಿಳಿಸಿವೆ.

ಎಸ್ಪಿಬಿ ಆರೋಗ್ಯ ಸ್ಥಿತಿ ಮತ್ತೆ ಗಂಭೀರ

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!