Wednesday, October 5, 2022

ಒಂದೇ ಕುಟುಂಬದ 6 ಮಂದಿ ನಿಗೂಢ ಸಾವು

Follow Us

newsics.com
ಭುವನೇಶ್ವರ್: ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿದ್ದಾರೆ.
ಶವಗಳನ್ನು ಬ್ಲಾಂಕೆಟ್‌ನಲ್ಲಿ ಸುತ್ತಿ ಇಡಲಾಗಿದೆ. ಬೊಲಾಂಗಿರ್ ಜಿಲ್ಲೆಯ ಪಟ್ನಾಗಡ ಪೊಲೀಸ್ ಠಾಣಾ ವ್ಯಾಪ್ತಿಯ ಸನ್ರಪದಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎಲ್ಲರ ರಕ್ತಸಿಕ್ತ ಶವಗಳೂ ಮನೆಯ ನೆಲದ ಮೇಲೆ ಪತ್ತೆಯಾಗಿವೆ.
ಮೃತರನ್ನು ಬುಲು ಜಾನಿ (50) ಅವರ ಪತ್ನಿ ಜ್ಯೋತಿ (48), ಹೆಣ್ಣುಮಕ್ಕಳಾದ ಸರಿತಾ ಮತ್ತು ಶ್ರೇಯಾ ಹಾಗೂ ಗಂಡುಮಕ್ಕಳಾದ ಭೀಷ್ಮ ಮತ್ತು ಸಂಜೀವ್ ಎಂದು ಗುರುತಿಸಲಾಗಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಂಡುಬಂದಿದೆ ಎಂದು ಎಸ್‌ಪಿ ಸಂದೀಪ್ ಸಂಪತ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!