newsics.com
ಆಂಧ್ರಪ್ರದೇಶ: ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ದೆಹಲಿಗೆ ತೆರಳುತ್ತಿದ್ದ ವಿಶೇಷ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಗನ್ನವರಂ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಬಳಿಕ ವಿಮಾನ ವಾಪಸ್ ಮರಳಿತು. ಗನ್ನವರಂ ವಿಮಾನ ನಿಲ್ದಾಣದಲ್ಲಿಯೇ ತುರ್ತು ಭೂಸ್ಪರ್ಶ ಮಾಡಿದೆ.
ನಂತರ ಅಲ್ಲಿಂದ ಜಗನ್ ತಕ್ಷಣವೇ ತಾಡೇಪಲ್ಲಿಗೆ ಹೊರಟರು. ಅವರು ದೆಹಲಿಗೆ ಮತ್ತೊಂದು ವಿಶೇಷ ವಿಮಾನದಲ್ಲಿ ಹೋಗಿದ್ದಾರೆ ಎಂದು ಹೇಳಲಾಗಿದೆ. ನಾಳೆ ದೆಹಲಿಯಲ್ಲಿ ಎಪಿ ಹೂಡಿಕೆ ಸಮಾವೇಶದ ಪೂರ್ವಸಿದ್ಧತಾ ಸಭೆಯಲ್ಲಿ ಜಗನ್ ಭಾಗವಹಿಸಲಿದ್ದಾರೆ.