Wednesday, October 5, 2022

ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಸ್ಥಿತಿ ಚಿಂತಾಜನಕ

Follow Us

newsics.com
ಕೋಲ್ಕತಾ: ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ವೈದ್ಯರು ಕೈಚೆಲ್ಲಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೀಡಾಗಿ ಅಕ್ಟೋಬರ್ 6 ರಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕಳೆದ ಕೆಲ ದಿನಗಳಿಂದ 85 ವರ್ಷದ ಸೌಮಿತ್ರ ಚಟರ್ಜಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಪವಾಡ ನಡೆಯದ ಹೊರತು ನಾವು ಏನೂ ಹೇಳಲು ಸಾಧ್ಯವಿಲ್ಲ. ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಎಲ್ಲರೂ ಪ್ರಾರ್ಥಿಸೋಣ ಎಂದು ಕೋಲ್ಕತ್ತಾದ ಸಿಟಿ ಆಸ್ಪತ್ರೆಯ ಹಿರಿಯ ವೈದ್ಯರು ಹೇಳಿದ್ದಾರೆ.
ಚಟರ್ಜಿ ಅವರ ಪರಿಸ್ಥಿತಿ ನಿಜವಾಗಿಯೂ ಗಂಭೀರ ಮತ್ತು ನಿರ್ಣಾಯಕ ಹಂತದಲ್ಲಿದೆ. ಅವರ ಆಮ್ಲಜನಕದ ಅಗತ್ಯತೆ ಪ್ರಮಾಣ ಹೆಚ್ಚಾಗಿದ್ದು, ಮೂತ್ರಪಿಂಡಗಳ ಕಾರ್ಯ ಸಂಪೂರ್ಣ ಹದಗೆಟ್ಟಿದೆ. ಗುರುವಾರ ಅವರಿಗೆ ಮೊದಲ ಪ್ಲಾಸ್ನಾ ಥೆರಪಿ ನೀಡಲಾಗಿತ್ತು. ಬುಧವಾರ ಟ್ರಾಕಿಯೊಸ್ಟೊಮಿ ನಡೆಸಲಾಗಿತ್ತು. ಆದರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

ಸಿಡ್ನಿಯಲ್ಲಿ ತರಬೇತಿ ವಿಮಾನ ಪತನ, ಟೀಮ್ ಇಂಡಿಯಾ ಪಾರು

ಸಿಎಂ ರಾಜಕೀಯ ಸಲಹೆಗಾರ ಹುದ್ದೆಯಿಂದ ಎಂ.ಬಿ. ಮರಂಕಲ್’ಗೆ ಕೊಕ್

ಸೇತುವೆಯಿಂದ ನದಿಗೆ ಬಿದ್ದ ಬಸ್: ಒಂದೇ ಕುಟುಂಬದ ಐವರ ಸಾವು, 8 ಮಂದಿಗೆ ಗಾಯ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!