Monday, September 27, 2021

ಸುಪ್ರೀಂಗೆ ಒಂದು ರೂ. ದಂಡ ಪಾವತಿಸಿದ ಪ್ರಶಾಂತ್‌ ಭೂಷಣ್

Follow Us

newsics.com
ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಭೂಷಣ್‌ ಸೋಮವಾರ ಪಾವತಿಸಿದ್ದಾರೆ.
ಆದರೆ, ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್‌ ಆದೇಶ ಒಪ್ಪಿದ್ದೇನೆ ಎಂದು ಅರ್ಥವಲ್ಲ ಎಂದು ಪ್ರಶಾಂತ್‌ ಭೂಷಣ್ ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್‌ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್‌, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರೊಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಒಂದು ರೂಪಾಯಿ ದಂಡ ವಿಧಿಸಿದ ನ್ಯಾಯಾಂಗ ನಿಂದನೆ ಕ್ರಿಮಿನಲ್‌ ಪ್ರಕರಣವನ್ನು ಬೇರೊಂದು ವಿಸ್ತೃತ ಪೀಠದಲ್ಲಿ ಪ್ರಶ್ನಿಸುವ ಅಧಿಕಾರ ನೀಡುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್‌ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್‌ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್‌14ರಂದು‌ ಸುಪ್ರೀಂಕೋರ್ಟ್ ಆದೇಶಿಸಿತ್ತು. ಅವರು ಮಾಡಿದ್ದ ಎರಡು ಟ್ವೀಟ್‌ಗಳು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಹೇಳಿತ್ತು.

ಸೆ.21ರಿಂದ ಶಾಲಾ-ಕಾಲೇಜು ಆರಂಭ; ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಅಲೆಕ್ಸಾದಲ್ಲಿ ಕೇಳಿಬರಲಿದೆ ಅಮಿತಾಬ್ ಧ್ವನಿ!

ಯೋಧರ ಹಿಂದೆ ನಿಲ್ಲೋಣ- ಮೋದಿ ಮನವಿ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!