Saturday, April 17, 2021

ಭಾರತಕ್ಕೆ ವೈದ್ಯಕೀಯ ನೆರವು ನೀಡಿದ ಯುಎಇ

ನವದೆಹಲಿ: ಕೊರೋನಾ ವಿರುದ್ಧ ಭಾರತದ ಹೋರಾಟಕ್ಕೆ ಸಂಯುಕ್ತ ಅರಬ್ ಗಣರಾಜ್ಯ(ಯುಎಇ)ವು ನೆರವಾಗಿದ್ದು, ಶನಿವಾರ ಏಳು ಮೆಟ್ರಿಕ್ ಟನ್‌ ವೈದ್ಯಕೀಯ ಅಗತ್ಯಗಳನ್ನು ರವಾನಿಸಿದೆ.
ನವದೆಹಲಿಯಲ್ಲಿರುವ ಯುಎಇ ರಾಯಭಾರಿ ಕಚೇರಿ ಈ ಮಾಹಿತಿ ನೀಡಿದ್ದು, ಈ ಪೂರೈಕೆ ಕೊರೋನಾ ವಿರುದ್ಧ ಹೋರಾಡುತ್ತಿರುವ ಸುಮಾರು 7,000 ವೈದ್ಯಕೀಯ ವೃತ್ತಿಪರರಿಗೆ ನೆರವಾಗಲಿದೆ ಎಂದು ತಿಳಿಸಿದೆ.
ಭಾರತಕ್ಕೆ ಯುಎಇ ನೆರವು ಉಭಯ ದೇಶಗಳ ನಡುವಿನ ಗಾಢ ಸಂಬಂಧಗಳ ದ್ಯೋತಕವಾಗಿದೆ ಎಂದು ಯುಎಇ ರಾಯಭಾರಿ ಅಹ್ಮದ್ ಅಬ್ದುಲ್ ರಹಮಾನ್ ಅಲ್‌ಬನ್ನಾ ಹೇಳಿದ್ದಾರೆ. ಯುಎಇ ಈವರೆಗೆ 34ಕ್ಕೂ ಹೆಚ್ಚು ದೇಶಗಳಿಗೆ 348 ಟನ್‌ಗೂ ಹೆಚ್ಚಿನ ವೈದ್ಯಕೀಯ ಅಗತ್ಯಗಳನ್ನು ಪೂರೈಸಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!