Wednesday, October 5, 2022

ಪ್ರಧಾನಮಂತ್ರಿ ಗೃಹ ನಿರ್ಮಾಣ ಯೋಜನೆಗೆ ಹೆಚ್ಚುವರಿಯಾಗಿ 18,000 ಕೋಟಿ ರೂಪಾಯಿ

Follow Us

Newsics.com

ನವದೆಹಲಿ: ದೇಶದ ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ ಆತ್ಮ ನಿರ್ಭರ್ ಭಾರತ ಯೋಜನೆಯಡಿ ಮೂರನೆ ಉತ್ತೇಜನಾ ಕ್ರಮಗಳನ್ನು ಘೋಷಿಸಿದೆ. ಮುಖ್ಯವಾಗಿ ಈ ಹಿಂದೆ ವರದಿಮಾಡಿದಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಿಸಲು ಗಮನ ಹರಿಸಲಾಗಿದೆ.

ಪ್ರಧಾನಿ ಆವಾಸ್ ಯೋಜನೆಗೆ ಹೆಚ್ಚುವರಿಯಾಗಿ 18,000 ಕೋಟಿ ರೂಪಾಯಿ ನೀಡಲಾಗಿದೆ. ಇದರಿಂದಾಗಿ 78 ಲಕ್ಷ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ಅದೇ ರೀತಿ ರಿಯಲ್ ಎಸ್ಟೇಟ್ ಕ್ಷೇತ್ರದ ಬೆಳವಣಿಗೆ ಖಾತರಿಪಡಿಸಲು ಕೇಂದ್ರ ಸರ್ಕಾರ ಹಲವು ಕೊಡುಗೆಗಳನ್ನು ಪ್ರಕಟಿಸಿದೆ. ಇದರಿಂದ ಮನೆ ಖರೀದಿದಾರರಿಗೂ  ರಿಯಲ್ ಎಸ್ಟೇಟ್ ಮಾಲಿಕರಿಗೂ ಪ್ರಯೋಜನವಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.

ದೇಶದಲ್ಲಿ ಉತ್ಪನ್ನಗಳ ಬಳಕೆ ಪ್ರಮಾಣ ಹೆಚ್ಚಾಗಿದೆ. ಅದೇ ರೀತಿ ವಿದ್ಯುತ್ ಶಕ್ತಿ ಬಳಕೆ ಕೂಡ ದಾಖಲೆ ಮಟ್ಟಕ್ಕೆ ತಲುಪಿದೆ. ಇದು ಆಶಾದಾಯಕ ಬೆಳವಣಿಗೆಯಾಗಿದೆ. ಸರ್ಕಾರ ಆರ್ಥಿಕ ಬೆಳವಣಿಗೆ ಖಾತರಿಪಡಿಸಲು ತೆಗೆದುಕೊಂಡ ಕ್ರಮಗಳು ಫಲ ನೀಡಲು ಆರಂಭಿಸಿವೆ ಎಂದು ನಿರ್ಮಲಾ ಸೀತಾರಾಮನ್ ಹಕ್ಕು  ಮಂಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!