newsics.com
ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು.
ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ.
ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
1978 ರಿಂದಲೂ ಡಾಲರ್ ಶೇಷಾದ್ರಿ ಅವರು ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 2007 ರಲ್ಲಿ ನಿವೃತ್ತರಾಗಿದ್ದರು. ನಂತರ ಒಎಸ್ ಡಿ ಆಗಿ ಮುಂದುವರೆದಿದ್ದರು.
ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: ಕ್ರಿಪ್ಟೋಕರೆನ್ಸಿ ಸೇರಿ 26 ಮಸೂದೆ ಮಂಡನೆ