ಚೆನ್ನೈ: ಶುಕ್ರವಾರ ನಿಧನರಾದ ಖ್ಯಾತ ಗಾಯಕ ಎಸ್ ಪಿ. ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇನ್ನು ಕೆಲವೇ ಹೊತ್ತಿನಲ್ಲಿ ನಡೆಯಲಿದೆ. ಇದೀಗ ಪಾರ್ಥಿವ ಶರೀರವನ್ನು ತಿರುವಳ್ಳೂರ್ ಜಿಲ್ಲೆಯ ತಮಾರೈ ಪಾಕ್ಕಂ ನಲ್ಲಿರುವ ಅವರ ಫಾರ್ಮ್ ಹೌಸ್ ನಲ್ಲಿ ಇರಿಸಲಾಗಿದೆ.
ಮುಂಜಾನೆಯಿಂದಲೇ ಸಾವಿರಾರು ಅಭಿಮಾನಿಗಳು ಸ್ವರ ಸಾಮ್ರಾಟನಿಗೆ ಭಾವಪೂರ್ಣ ನಮನ ಸಲ್ಲಿಸಿದರು. ಎರಡು ಕಿಲೋ ಮೀಟರ್ ದೂರದಲ್ಲಿ ಅಭಿಮಾನಿಗಳನ್ನು ತಡೆದು ನಿಲ್ಲಿಸಿ ಬಳಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಲಿಸಲಾಯಿತು.
ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿರುವಳ್ಳೂರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರವಿಂದನ್ ತಿಳಿಸಿದ್ದಾರೆ. 500 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.