Saturday, April 17, 2021

ಮೂವರು ಸಿಆರ್’ಪಿಎಫ್ ಯೋಧರು ಹುತಾತ್ಮ, ಓರ್ವ ಉಗ್ರನ ಹತ್ಯೆ

ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಕಾರ್ಯಾಚರಣೆಯಲ್ಲಿ ಮೂವರು ಸಿಆರ್’ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಒಬ್ಬ ಉಗ್ರನನ್ನು ಹತ್ಯೆಗೈಯಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್ ಗುಂಡ್ ನ ವಾಂಗಾಮ್ ಖಾಜಿಯಾಬಾದ್ ನಲ್ಲಿ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ಈ ದಿಢೀರ್ ದಾಳಿಯಿಂದಾಗಿ ಕರ್ತವ್ಯನಿರತರಾಗಿದ್ದ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ 7 ಸೈನಿಕರು ಗಾಯಗೊಂಡಿದ್ದು, ಗಾಯಾಳು ಸೈನಿಕರನ್ನು ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಡೀ ಪ್ರದೇಶವನ್ನು ಸೇನೆ ಸುತ್ತುವರೆದಿದ್ದು, ಹೆಚ್ಚುವರಿ ಭದ್ರತಾ ಪಡೆಗಳ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆಗೆಳಿದಿವೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!