newsics.com
ರಾಯ್ ಪುರ: ಛತ್ತೀಸ್ ಗಢದಲ್ಲಿ ನಕ್ಸಲ್ ನಿಗ್ರಹ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲೀಯರು ಹತರಾಗಿದ್ದಾರೆ. ಮಿರ್ತೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಖಚಿತ ಮಾಹಿತಿ ಆಧಾರದಲ್ಲಿ ವಿಶೇಷ ಪೊಲೀಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲೀಯರು ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಛತ್ತೀಸ್ ಗಢದ ಬಿಜಾಪುರ ಜಿಲ್ಲೆ ನಕ್ಸಲ್ ಪೀಡಿತ ಪ್ರದೇಶವಾಗಿದೆ. ಹೆಚ್ಚುವರಿ ಪಡೆಗಳನ್ನು ಕಾರ್ಯಾಚರಣೆ ನಡೆದ ಸ್ಥಳಕ್ಕೆ ರವಾನಿಸಲಾಗಿದೆ