newsics.com
ಶ್ರೀನಗರ: ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಾರಾಮುಲ್ಲಾದ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ.
ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಸಾವಿಗೀಡಾಗಿದ್ದು, ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
‘ಮಳಲಿ ಮಸೀದಿಯ ಸ್ಥಳದಲ್ಲಿದೆ ಹಿಂದೂ ದೈವಿ ಶಕ್ತಿ’ : ತಾಂಬೂಲ ಪ್ರಶ್ನೆಯಲ್ಲಿ ಉತ್ತರ