newsics.com
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಸೋಫಿಯಾನ್ ಜಿಲ್ಲೆಯಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
ಸೋಫಿಯಾನ್ ಜಿಲ್ಲೆಯ ತುರ್ಲಾನ್ ಗ್ರಾಮದ ಇಮಾಂ ಸಾಹಬ್ ಗ್ರಾಮದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಹತರಾದ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಲಾಗಿದೆ.
ಈ ಮಧ್ಯೆ ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಉಗ್ರರ ಹುಟ್ಟಡಗಿಸಲು ಹೆಚ್ಚುವರಿ ಪಡೆಗಳನ್ನು ರವಾನಿಸಲಾಗಿದೆ. ಅಪ್ಘಾನಿಸ್ತಾನದಲ್ಲಿ ಸಕ್ರಿಯವಾಗಿದ್ದ ಉಗ್ರ ಗುಂಪುಗಳು ಇದೀಗ ಕಾಶ್ಮೀರಕ್ಕೆ ನುಸುಳಲು ಯತ್ನಿಸುತ್ತಿವೆ ಎಂದು ಶಂಕಿಸಲಾಗಿದೆ.