Saturday, April 17, 2021

ಸೋಫಿಯಾನ್ ಎನ್ ಕೌಂಟರ್ : ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಸೋಫಿಯಾನ್ ನಲ್ಲಿ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಸೋಫಿಯಾನ್ ಸಮೀಪದ ಸುಗೋ ಎಂಬಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು. ಇದೀಗ ಇಡೀ ಪ್ರದೇಶವನ್ನು ಭದ್ರತಾಪಡೆಗಳು ಸುತ್ತುವರಿದಿದ್ದು, ಶೋಧ ಕಾರ್ಯ ಮುಂದುವರಿದಿದೆ.  ಕಳೆದ  15 ದಿನಗಳಲ್ಲಿ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 22 ಉಗ್ರರು ಹತರಾಗಿದ್ದಾರೆ.  ಇವರಲ್ಲಿ  8 ಮಂದಿ ಹಿರಿಯ ಕಮಾಂಡರ್ ಗಳು ಕೂಡ ಸೇರಿದ್ದಾರೆ. ಈ ಮಧ್ಯೆ ಜಮ್ಮು ಕಾಶ್ಮೀರದ  ರಜೌರಿ ಜಿಲ್ಲೆಯ ನೌಷೇರಾ ವಲಯದಲ್ಲಿ ಇಂದು ಮುಂಜಾನೆ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು, ಭಾರತದ ಪಡೆಗಳು ದಿಟ್ಟ ಪ್ರತ್ಯುತ್ತರ ನೀಡಿವೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!