ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ಮುಂಜಾನೆ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ ಮೂರಕ್ಕೆ ಏರಿದೆ. ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು. ಶ್ರೀನಗರ ಸಮೀಪದ ಬಾಟಾಮಾಲೂ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಉಗ್ರರು ಅವಿತಿರುವ ಮಾಹಿತಿ ದೊರೆತ ಕೂಡಲೇ ಭದ್ರತಾಪಡೆ ಕಾರ್ಯಾಚರಣೆ ಆರಂಭಿಸಿತು. ಮೊದಲು ಶರಣಾಗತರಾಗುವಂತೆ ಸೂಚನೆ ನೀಡಲಾಯಿತು. ಇದಕ್ಕೆ ಸ್ಪಂದಿಸದೆ ಗುಂಡು ಹಾರಾಟ ನಡೆಸಿದಾಗ ಗುಂಡಿನಿಂದಲೇ ಪ್ರತ್ಯುತ್ತರ ನೀಡಲಾಯಿತು. ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದ್ದು, ಶೋಧ ಕಾರ್ಯಮುಂದುವರಿದಿದೆ