Saturday, April 17, 2021

ಶ್ರೀನಗರದಲ್ಲಿ ಮೂರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರ ಸಮೀಪದ ಝಾದಿಬಾಲ್ ಎಂಬಲ್ಲಿ ಮನೆಯೊಂದರಲ್ಲಿ ಆಶ್ರಯಪಡೆದಿದ್ದ ಮೂವರು ಉಗ್ರರು ಭದ್ರತಾಪಡೆಯ ಗುಂಡಿಗೆ ಬಲಿಯಾಗಿದ್ದಾರೆ.. ಉಗ್ರರ ಪೋಷಕರನ್ನು ಕರೆಯಿಸಿ ಅವರ ಮನವೊಲಿಕೆ ಯತ್ನ ವಿಫಲಗೊಂಡ ಬಳಿಕ ಸೇನೆ ಕಾರ್ಯಾಚರಣೆ ಆರಂಭಿಸಿತು. ಶರಣಾಗತರಾಗುವಂತೆ ಭದ್ರತಾಪಡೆ ಮಾಡಿದ ನಿರಂತರ ಮನವಿಯನ್ನು ನಿರ್ಲಕ್ಷಿಸಿ ಗುಂಡು ಹಾರಿಸಿದಾಗ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿತು.  ಇದೀಗ ಶೋಧ ಕಾರ್ಯ ಮುಂದುವರಿದಿದೆ.  ಭಯೋತ್ಪಾದಕರು ಶ್ರೀನಗರಕ್ಕೆ ನುಸುಳಿರುವ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!