newsics.com
ಲಂಡನ್: ಇಲ್ಲಿನ ಲಾರ್ಡ್ಸ್ ಮೈದಾನದಲ್ಲಿ ಭಾರತದ ಬ್ಯಾಟ್ಸ್ ಮನ್ ಕೆ.ಎಲ್ ರಾಹುಲ್ ಮೇಲೆ ಶಾಂಪೇನ್ ಬಾಟಲಿಯ ಮುಚ್ಚಳ (ಬಾಟಲ್ ಕಾರ್ಕ್) ಎಸೆಯಲಾಗಿದೆ.
ಈ ಘಟನೆಯಿಂದಾಗಿ ಪಂದ್ಯ ಕೆಲ ಕಾಲ ಸ್ಥಗಿತಗೊಂಡಿತ್ತು. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಈ ಘಟನೆ ನಡೆದಿದೆ.
ಕೆ.ಎಲ್ ರಾಹುಲ್ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ (129) ಗಳಿಸಿದ್ದರು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡುವ ವೇಳೆ ಇನ್ನಿಂಗ್ಸ್ ನ 69ನೇ ಓವರ್‌ನ ವೇಳೆ ಮೊಹಮದ್ ಶಮಿ ಬೌಲಿಂಗ್ ಮಾಡುತ್ತಿದ್ದಾಗ ಪ್ರೇಕ್ಷಕರ ಗ್ಯಾಲರಿಯಿಂದ ರಾಹುಲ್ ಮೇಲೆ ಶಾಂಪೇನ್ ಬಾಟಲಿ ಮುಚ್ಚಳ ಎಸೆಯಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಭಾರತದ ಆಟಗಾರರು ಅಂಪೈರ್‌ಗಳಾದ ಮೈಕೆಲ್ ಗಾಗ್ ಮತ್ತು ರಿಚರ್ಡ್ ಇಲ್ಲಿಂಗ್‌ವರ್ತ್ ಅವರೊಂದಿಗೆ ಮಾತುಕತೆ ನಡೆಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಒಂದೂವರೆ ಕೋಟಿ ಭಾರತೀಯರಿಂದ ರಾಷ್ಟ್ರಗೀತೆ
ಹಿರಿಯ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಇನ್ನಿಲ್ಲ
ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯೋಣ: ಸಿಎಂ ಬೊಮ್ಮಾಯಿ