ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳ ವಿರುದ್ಧ ಹೊಸದಾಗಿ ಡೆತ್ ವಾರಂಟ್ ಜಾರಿಗೊಳಿಸುವಂತೆ ತಿಹಾರ್ ಜೈಲು ಅಧಿಕಾರಿಗಳು ದೆಹಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಅಪರಾಧಿಗಳಲ್ಲಿ ಒಬ್ಬನಾದ ಮುಖೇಶ್ ಸಿಂಗ್ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ ಬೆನ್ನಲ್ಲೇ ಅವರನ್ನು ನೇಣಿಗೇರಿಸುವ ದಿನಾಂಕ ಪ್ರಕಟಿಸುವಂತೆ ಜೈಲಾಧಿಕಾರಿಗಳು ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.