Newsics.com
ತಿರುಪತಿ: ಏಳು ಬೆಟ್ಟಗಳ ಒಡೆಯ ತಿರುಪತಿ ತಿಮ್ಮಪ್ಪನ ಆದಾಯದಲ್ಲಿ ಇತ್ತೀಚಿನ ದಿನಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಕೊರೋನಾದಿಂದಾಗಿ ಆದಾಯ ಕುಸಿದಿದ್ದರೂ ಇದೀಗ ಚೇತರಿಕೆ ಕಂಡು ಬಂದಿದೆ.
ಕಳೆದ 24 ಗಂಟೆ ಅವಧಿಯಲ್ಲಿ ತಿಮ್ಮಪ್ಪನ ಹುಂಡಿಯಲ್ಲಿ 1. 74 ಕೋಟಿ ರೂಪಾಯಿ ಸಂಗ್ರಹವಾಗಿದೆ. ಮುಂಬರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಇದು ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ದೇಶದ ಹಲವು ಮನೆಗಳಲ್ಲಿ ವರ್ಷಕ್ಕೆ ಒಂದು ಬಾರಿ ತಿಮ್ಮಪ್ಪನ ದರ್ಶನ ಮಾಡಬೇಕೆಂಬ ಪದ್ದತಿಯನ್ನು ಚಾಚೂ ತಪ್ಪದೆ ಪಾಲಿಸುತ್ತಿದ್ದಾರೆ. ಈ ಭಕ್ತರು ಅದು ಎಷ್ಟೇ ಕಷ್ಟವಾದರೂ ಏಳು ಬೆಟ್ಟಗಳ ಒಡೆಯ ತಿಮ್ಮಪ್ಪನ ದರ್ಶನ ಪಡೆಯಲು ಆಗಮಿಸುತ್ತಾರೆ