ನವದೆಹಲಿ: ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಪ್ರತಿಷ್ಟೆಯ ವಿಷಯವಾಗಿ ಪರಿವರ್ತನೆಗೊಂಡಿರುವ ದೆಹಲಿ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಹಾಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ ಕ್ರೇಜಿವಾಲ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಕೂಡ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಯಾರನ್ನು ಕೂಡ ಹೆಸರಿಸದ ಬಿಜೆಪಿ, ಕೇಂದ್ರ ಸರ್ಕಾರದ ಸಾಧನೆಯ ಮಾನದಂಡದಲ್ಲಿ ಮತದಾರರ ಮನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ.