Wednesday, March 3, 2021

ಕೋರ್ಟ್ ಆವರಣದಲ್ಲೇ ತಲಾಖ್ ಹೇಳಿದ ಪತಿ ಪರಾರಿ

newsics.com
ರಾಂಪುರ (ಉತ್ತರ ಪ್ರದೇಶ): ರಾಂಪುರ ನ್ಯಾಯಾಲಯದ ಆವರಣದಲ್ಲೇ ವ್ಯಕ್ತಿಯೋರ್ವ ತನ್ನ ಪತ್ನಿಗೆ ತಲಾಖ್ ನೀಡಿದ್ದಾನೆ.
ಅಜೀಂ ನಗರ ನಿವಾಸಿ ಶಯರೂಲ್ ಅವರ ವಿವಾಹ ತಾಂಡಾ ನಿವಾಸಿ ಅನೀಶ್ ಜತೆ ಆಗಿತ್ತು. ಮದುವೆಯಾದ ಕೆಲವು ದಿನಗಳ ನಂತರ ಪತಿ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣೆ ನೀಡುವಂತೆ ಕಿರುಕುಳ ನೀಡಲಾರಂಭಿಸಿದ್ದಾರೆ. ನೊಂದ ಮಹಿಳೆ ಈ ಸಂಬಂಧ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ರಾಂಪುರ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಬಂಧ ವಿಚಾರಣೆ ನಡೆಯುತ್ತಿದ್ದು, ಹೇಳಿಕೆಗಳನ್ನು ದಾಖಲಿಸಲು ಶಯರೂಲ್ ಕೋರ್ಟ್ಗೆ ಬಂದ ವೇಳೆ ಅನೀಶ್ ತ್ರಿವಳಿ ತಲಾಖ್ ನೀಡಿ ಪರಾರಿಯಾಗಿದ್ದಾನೆ.
2019ರ ಆಗಸ್ಟ್ 1 ರಂದು ತ್ರಿವಳಿ ತಲಾಖ್ ಅನ್ನು ನಿಷೇಧ ಮಾಡಲಾಗಿದ್ದು, ತನ್ನ ಹೆಂಡತಿಗೆ ಮೂರು ಬಾರಿ ತಲಾಖ್ ಎಂದು ಉಚ್ಚರಿಸುವ ಯಾವುದೇ ಮುಸ್ಲಿಂ ವ್ಯಕ್ತಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಯಲ್ಲಿದೆ.

ಮತ್ತಷ್ಟು ಸುದ್ದಿಗಳು

Latest News

ಕಾನೂನು ಹೋರಾಟಕ್ಕೆ ರಮೇಶ್ ಜಾರಕಿಹೊಳಿ ಸಿದ್ಧತೆ, ಅಜ್ಞಾತ ಸ್ಥಳದಲ್ಲಿ ಕಾರ್ಯತಂತ್ರ

newsics.com ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಚಿಸಿರುವ ಸೆಕ್ಸ್ ಸಿಡಿ ಹಿನ್ನೆಲೆಯಲ್ಲಿ ಪದಚ್ಯುತಿ ಭೀತಿ ಎದುರಿಸುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ಕಾನೂನು ಸಮರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಅಜ್ಞಾತ...

ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಐಷಾರಾಮಿ ಹೋಟೆಲ್!

newsics.comವಾಷಿಂಗ್ಟನ್‌: ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಇಡ್ಲಿ, ಟೀ, ಕಾಫಿ ಸಿಗಬಹುದು.ಮುಂದಿನ 4 ವರ್ಷದಲ್ಲಿ ಅಂತರಿಕ್ಷದಲ್ಲಿ  “ವೊಯೇಜರ್‌ ಸ್ಟೇಷನ್‌’ ಎಂಬ ವೈಭವೋಪೇತ ಹೋಟೆಲೊಂದು ಆರಂಭವಾಗಲಿದೆ. ಆರ್ಬಿಟಲ್‌ ಅಸೆಂಬ್ಲಿ ಕಾರ್ಪೊರೇಷನ್‌ (ಒಎಸಿ)...

ಮನೆಯಲ್ಲೇ ಲಸಿಕೆ ಪಡೆದ ಕೃಷಿ ಸಚಿವ; ವರದಿ ಕೇಳಿದ ಕೇಂದ್ರ

newsics.comನವದೆಹಲಿ: ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಇಂದು(ಮಾ.2) ತಮ್ಮ ಮನೆಯಲ್ಲೇ ಕೊರೋನಾ ಲಸಿಕೆ ಹಾಕಿಸಿಕೊಂಡಿರುವುದು ವಿವಾದಕ್ಕೆಡೆ ಮಾಡಿದೆ.ನರ್ಸ್ಗಳನ್ನು ಮನೆಗೆ ಕರೆಸಿಕೊಂಡು ಸಚಿವ ಬಿ.ಸಿ.ಪಾಟೀಲ್ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದು,...
- Advertisement -
error: Content is protected !!