Wednesday, October 5, 2022

96 ಗಂಟೆಗಳ ಕಾರ್ಯಾಚರಣೆ ವಿಫಲ: ಹಾರಿ ಹೋಯ್ತು ಕೊಳವೆ ಬಾವಿಗೆ ಬಿದ್ದ ಮಗುವಿನ ಪ್ರಾಣ

Follow Us

Newsics.com

ಭೋಪಾಲ್:  ಕೊಳವೆ ಬಾವಿಗೆ ಬಿದ್ದ ಮಗು ಸುರಕ್ಷಿತವಾಗಿರಲಿ ಎಂದು ದೇಶದ ಲಕ್ಷಾಂತರ ಮಂದಿ ಮಾಡಿದ ಪ್ರಾರ್ಥನೆ, ಪೂಜೆ ಫಲ ನೀಡಿಲ್ಲ. ಸತತ 96 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರೂ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಮಧ್ಯಪ್ರದೇಶದ  ನಿವಾರದ ಎಂಬಲ್ಲಿ ಕೊಳವೆ ಬಾವಿಗೆ ಬಿದ್ದ ಮೂರು ವರ್ಷದ ಮಗು ಪ್ರಹ್ಲಾದ್ ನನ್ನು ಇಂದು ಮೇಲಕ್ಕೆತ್ತಲಾಯಿತು. ಅಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಮೂರು ವರ್ಷ ಪ್ರಾಯದ  ಪ್ರಹ್ಲಾದ್ ಮನೆಯ ಮುಂದೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ. ತಕ್ಷಣ ಜಿಲ್ಲಾಡಳಿತಕ್ಕೆ ಮಾಹಿತಿ ರವಾನಿಸಲಾಯಿತು. ಬುಧವಾರ ಈ ಘಟನೆ ನಡೆದಿತ್ತು.

58 ಅಡಿ ಆಳದ ಕೊಳವೆ ಬಾವಿಗೆ ಪರ್ಯಾಯವಾಗಿ ಸುರಂಗ ತೋಡುವ ಮೂಲಕ ಮಗುವನ್ನು ರಕ್ಷಿಸುವ ಪ್ರಯತ್ನ ನಡೆಸಲಾಯಿತು. ನಿಷೇಧಾಜ್ಞೆ ಜಾರಿಗೊಳಿಸುವುದರ ಮೂಲಕ ರಕ್ಷಣಾ ಕಾರ್ಯಾಚರಣೆಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಸ್ವತ:  ಈ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ಅಂತಿಮವಾಗಿ 96 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಗುವನ್ನು ಮೇಲಕ್ಕೆತ್ತಲಾಯಿತು. ಆದರೆ ಮಗುವಿನ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

 

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!