Tuesday, July 5, 2022

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

Follow Us

newsics.com

ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ.

ಅಮ್ರೀನ್ ಭಟ್ ಜಿಲ್ಲೆಯ ಚಡೂರ ಪ್ರದೇಶದ ಹುಶ್ರೂ ನಿವಾಸಿ. ಅಮ್ರೀನ್‌ ಅವರ ಮನೆಯ ಬಳಿಯೇ ಉಗ್ರರು ಅವರ ಮೇಲೆ ರಾತ್ರಿ 8 ಗಂಟೆಗೆ ಗುಂಡಿನ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಅಮ್ರೀನ್‌ ಜೊತೆ ಅವರ ಸೋದರ ಸಂಬಂಧಿ ಫರಾನ್‌ ಝುಬೈರ್‌ ಕೂಡಾ ಗಾಯಗೊಂಡಿದ್ದಾರೆ. ಅಮ್ರೀನ್‌ ಅವರನ್ನು ಚಡೂರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪ್ರಯೋಜನವಾಗಲಿಲ್ಲ.

ದಾಳಿ ನಡೆದ ಪ್ರದೇಶದಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ. ಉಗ್ರರನ್ನು ಪತ್ತೆ ಮಾಡಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದ ಅಮ್ರೀನ್‌ ಭಟ್‌, ಅವರ ಗಾಯನ, ಕಿರುಚಿತ್ರದ ಹಲವು ಕ್ಲಿಪ್‌ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

ಮಗನ ಪಬ್ ಜಿ ಆಟಕ್ಕೆ ತಾಯಿ ಬಲಿ

ರಾಜ್ಯದಲ್ಲಿಂದು 208 ಕೋವಿಡ್ ಪ್ರಕರಣ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!