ಕಾಸರಗೋಡು: ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಕೋಟಿ ರೂಪಾಯಿ ಹಣವನ್ನು ಕಾಸರಗೋಡಿನ ಕುಂಬಳೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಸೂಕ್ತ ದಾಖಲೆಪತ್ರಗಳಿಲ್ಲದೆ ಈ ಹಣವನ್ನು ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂದು ಮುಂಜಾನೆ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಯಿತು.
ಮಂಜೇಶ್ವರದ ವ್ಯಕ್ತಿಯೊಬ್ಬರು ಕಾರು ಚಲಾಯಿಸುತ್ತಿದ್ದು ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿ ಬಳಿ ಇದ್ದ 20 ಪವನ್ ಚಿನ್ನವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಇಷ್ಟು ಬೃಹತ್ ಮೊತ್ತದ ಹಣವನ್ನು ಯಾರಿಗೆ ತಲುಪಿಸಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ಮುಂದುವರಿದಿದೆ
ಕಾಸರಗೋಡಿನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾದ ಬೃಹತ್ ಪ್ರಮಾಣದ ಹಣ ಇದಾಗಿದೆ.