NEWSICS.COM
ಮಧುರೈ: ಹಳೆಯ ಕಟ್ಟಡವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾದ ಬೆಂಕಿನಂದಿಸಲು ಹೋದ ಅಗ್ನಿ ಶಾಮಕ ಸಿಬ್ಬಂದಿಗಳ ಮೇಲೆ ಕಟ್ಟಡ ಕುಸಿದಿದೆ. ಪರಿಣಾಮ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ.
ಮಧುರೈನ ಹಳೆಯ ಕಟ್ಟಡದಲ್ಲಿ ಬೆಂಕಿ ನಂದಿಸುವ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆ. ಶಿವರಾಜನ್ ಮತ್ತು ಪಿ ಕೃಷ್ಣಮೂರ್ತಿ ಮೃತ ದುರ್ದೈವಿಗಳು.
ಘಟನೆ ಸಂಬಂಧ ಮುಖ್ಯಮಂತ್ರಿ ಪಳನಿಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಕಾರ್ಮಿಕರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಅರ್ಹತೆಯ ಆಧಾರದ ಮೇಲೆ ಮೃತ ಸಂಬಂಧಿಗಳಲ್ಲಿ ಒಬ್ಬರಿಗೆ ಕೆಲಸ ನೀಡುವುದಾಗಿ ಭರವಸೆ ನೀಡಿದ್ದಾರೆ.
ನಿಮ್ಮ ಸಂತಸ ನನ್ನ ನಗುವನ್ನು ದ್ವಿಗುಣಗೊಳಿಸುತ್ತದೆ- ಯೋಧರಿಗೆ ಪ್ರಧಾನಿ ಭಾವನಾತ್ಮಕ ಸಂದೇಶ