Saturday, November 26, 2022

ಎರಡು ತಿಂಗಳಲ್ಲಿ ಎರಡು ಬಾರಿ ಎರಡು ತಿಂಗಳ ಮಗುವಿನ ಅಪಹರಣ: 24 ಗಂಟೆ ಭದ್ರತೆ

Follow Us

newsics.com

ಅಹ್ಮದಾಬಾದ್: ಎರಡು ತಿಂಗಳ ಮಗುವನ್ನು ಎರಡು ತಿಂಗಳಲ್ಲಿ ಎರಡು ಬಾರಿ ಅಪಹರಿಸಿದ ಹಿನ್ನೆಲೆಯಲ್ಲಿ ಮಗುವಿಗೆ ದಿನದ 24 ಗಂಟೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಗುಜರಾತಿನ ಗಾಂಧೀನಗರ ಸಮೀಪದ ಅದಾಲಜ್ ನಲ್ಲಿ ವಾಸಿಸುತ್ತಿರುವ ಮಗುವಿಗೆ ಈ ರಕ್ಷಣೆ ನೀಡಲಾಗಿದೆ.

ನವಜಾತ ಶಿಶುವಿಗೆ ಕೇವಲ ಎರಡು ದಿನಗಳಾಗಿದ್ದಾಗ  ಮೊದಲ ಬಾರಿ ಮಗುವನ್ನು ಅಪಹರಿಸಲಾಗಿತ್ತು.  ಬಳಿಕ ಮಗುವನ್ನು ಪತ್ತೆ ಹಚ್ಚಿ ಪೋಷಕರಿಗೆ ಹಸ್ತಾಂತರಿಸಲಾಗಿತ್ತು.

ಆ ಬಳಿಕ  ಮದುವೆಯಾಗಿ ಮಕ್ಕಳಿಲ್ಲದ  ಬನ್ಸಾವಾಡದ ದಂಪತಿ ಮಗುವನ್ನು ಅಪಹರಿಸಿದ್ದರು.  ದಿನೇಶ್ ಮತ್ತು ಸುಧಾ ಕಟಾರ ದಂಪತಿ ಈ ಕೃತ್ಯ ಎಸಗಿದ್ದರು.

ಮಗುವಿನ  ಪೋಷಕರು ಕೊಳಗೇರಿಯಲ್ಲಿ ವಾಸಿಸುತ್ತಿದ್ದು ಅಲ್ಲಿ  ಸೂಕ್ತ ಭದ್ರತೆ ಇರಲಿಲ್ಲ. ಇದೀಗ ಅಪಹರಣ ಪ್ರಕರಣ ಮರುಕಳಿಸುವುದನ್ನು ತಪ್ಪಿಸಲು  ಕೊಳಗೇರಿಯಲ್ಲಿ ಪೊಲೀಸ್ ಕಾವಲು ಏರ್ಪಡಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!