Saturday, April 17, 2021

ವಿಕಾಸ್ ದುಬೆಗೆ ಮಾಹಿತಿ ಸೋರಿಕೆ:ಇಬ್ಬರು ಪೊಲೀಸ್ ಅಧಿಕಾರಿಗಳ ಬಂಧನ

ಕಾನ್ಪುರ: ಪಾತಕಿ ವಿಕಾಸ್ ದುಬೆಗೆ ಪೊಲೀಸ್ ಕಾರ್ಯಾಚರಣೆ ಕುರಿತು ಮಾಹಿತಿ ಸೋರಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ.  ಎರಡು ದಿನಗಳ ಹಿಂದೆ ಈ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಬಂಧಿತ ಅಧಿಕಾರಿಗಳನ್ನು   ಸ್ಟೇಷನ್ ಅಧಿಕಾರಿ ವಿಜಯ್ ತಿವಾರಿ ಮತ್ತು ಬೀಟ್ ಇನ್ ಚಾರ್ಜ್‌ ಕೆ.ಕೆ . ಶರ್ಮಾ ಎಂದು ಗುರುತಿಸಲಾಗಿದೆ.

ವಿಕಾಸ್ ದುಬೆ ಮನೆಯ ಮೇಲೆ ನಡೆದ ಕಾರ್ಯಾಚರಣೆ ಸಂದರ್ಭದಲ್ಲಿ ಈ ಇಬ್ಬರು ಅಧಿಕಾರಿಗಳು ಉಪಸ್ಥಿತರಿದ್ದರು. ಆದರೆ ಗುಂಡಿನ ಚಕಮಕಿ ವೇಳೆ ಅಲ್ಲಿಂದ ಪಲಾಯನ ಮಾಡಿದ್ದರು ಎಂದು ಕಾನ್ಪುರ ರೇಂಜ್ ಐಜಿಪಿ ಮೋಹಿತ್ ಅಗರ್ವಾಲ್ ಹೇಳಿದ್ದಾರೆ. ಕಾರ್ಯಾಚರಣೆ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ವಿಕಾಸ್ ದುಬೆ ಪೊಲೀಸರ ಮೇಲೆ ಗುಂಡಿನಿಂದ ದಾಳಿ ಮಾಡಿದ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ಕಾನ್ಪುರ ಮತ್ತು ಫರೀದಾಬಾದ್ ನಲ್ಲಿ ನಡೆದ ಎನ್ ಕೌಂಟರ್ ಬಳಿಕ ವಿಕಾಸ್ ದುಬೆಯ ಆರು ಮಂದಿ ಸಹಚರರನ್ನು ಬಂಧಿಸಲಾಗಿದೆ. ಇನ್ನೊಂದೆಡೆ ಅಮಿರ್ ಪುರ್ ನಲ್ಲಿ ಉತ್ತರ ಪ್ರದೇಶ ವಿಶೇಷ ಪೊಲೀಸ್ ತಂಡ ನಡೆಸಿದ ಎನ್ ಕೌಂಟರ್ ನಲ್ಲಿ ವಿಕಾಸ್ ದುಬೆಯ ಸಹಚರ ಅಮರ್ ದುಬೆ ಹತನಾಗಿದ್ದಾನೆ. ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ ಬಳಿಕ ವಿಕಾಸ್ ದುಬೆ ತಂಡದ ಮೂವರು ಪೊಲೀಸ್ ಗುಂಡಿಗೆ ಬಲಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!