Saturday, April 17, 2021

ಅನಂತನಾಗ್ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ ನಾಗ್ ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಯಮಪುರಿಗೆ ಅಟ್ಟಲಾಗಿದೆ.  ಶರಣಾಗತರಾಗುವಂತೆ ಸೂಚಿಸಿದ್ದರೂ ಅದನ್ನು ನಿರ್ಲಕ್ಷಿಸಿ ಗುಂಡಿನ ದಾಳಿ ನಡೆಸಿದಾಗ ಭದ್ರತಾಪಡೆ ಗುಂಡಿನಿಂದಲೇ ಉತ್ತರ ನೀಡಿತ್ತು. ಸಾವನ್ನಪ್ಪಿದ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರಾಗಿದ್ದಾರೆ. ಅಪಾರ ಪ್ರಮಾಣದ ಶಸ್ತಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ,  ಶ್ರೀನಗರ ಸಮೀಪದ ಬಂಡಿಪೋರ ಎಂಬಲ್ಲಿ ಸೇತುವೆ ಬಳಿ ಸುಧಾರಿತ ಸ್ಫೋಟಕ ವಸ್ತುವನ್ನು  ಪತ್ತೆ ಹಚ್ಚಲಾಗಿದ್ದು, ಸಂಭಾವ್ಯ ದುರಂತವನ್ನು ತಪ್ಪಿಸಲಾಗಿದೆ. ಚಿಕ್ಕ ಸಿಲಿಂಡರ್ ಗೆ ಇದನ್ನು ಜೋಡಿಸಿ ಟೈಮರ್ ಜತೆ ಸೇತುವೆ ಬಳಿ ಇರಿಸಲಾಗಿತ್ತು.  ಕಳೆದ 15 ದಿನಗಳಲ್ಲಿ ಜಮ್ಮು ಕಾಶ್ಮೀರದಲ್ಲಿ 25ಕ್ಕೂ ಭಯೋತ್ಪಾದಕರು ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!