Monday, April 12, 2021

ಸೋಪೋರ್ ಎನ್ ಕೌಂಟರ್ : ಇಬ್ಬರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಸೋಪೋರ್ ಸಮೀಪದ ಅರ್ದಶಿವ ಎಂಬಲ್ಲಿ  ಇಬ್ಬರು ಭಯೋತ್ಪಾದಕರನ್ನು ಯಮಪುರಿಗೆ ಅಟ್ಟಲಾಗಿದೆ. ಶರಣಾಗತರಾಗುವಂತೆ ಮಾಡಿದ ಮನವಿ ನಿರಾಕರಿಸಿದಾಗ ಭಯೋತ್ಪಾದಕರಿಗೆ  ಗುಂಡಿನಿಂದಲೇ ಉತ್ತರ ನೀಡಲಾಯಿತು. ಇಂದು ಮುಂಜಾನೆ  ಈ ಕಾರ್ಯಾಚರಣೆ ನಡೆಸಲಾಯಿತು. ಸೇನೆ, ರಾಷ್ಟ್ರೀಯ ರೈಫಲ್ಸ್  ಮತ್ತು ಜಮ್ಮು ಕಾಶ್ಮೀರ  ಪೊಲೀಸ್ ದಳ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿತು. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಘಟನಾ ಸ್ಥಳದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನೊಂದೆಡೆ ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಐದು ಮಂದಿಯನ್ನು ಬದ್ ಗಾಂ ನಲ್ಲಿ ಬಂಧಿಸಲಾಗಿದೆ. ಈ ಆರೋಪಿಗಳು ಉಗ್ರರಿಗೆ ಎಲ್ಲ ರೀತಿಯ ನೆರವು ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಎಕೆ- 47 ರೈಫಲ್‌ ನ್ನು ಈ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಕಳೆದ 15 ದಿನಗಳಿಂದ ಭದ್ರತಾಪಡೆ ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!