Saturday, April 17, 2021

ಸ್ವಂತ ಕಾರು ಇಲ್ಲದ ಮಹಾರಾಷ್ಟ್ರ ಮುಖ್ಯಮಂತ್ರಿ

ಮುಂಬೈ; ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ 143 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಹೊಂದಿದ್ದಾರೆ. ಇದರಲ್ಲಿ ಚರ ಮತ್ತು ಸ್ಥಿರ ಆಸ್ತಿ ಸೇರಿದೆ. ಆದರೆ ಮುಖ್ಯಮಂತ್ರಿ  ಉದ್ದವ್ ಠಾಕ್ರೆ ತಮ್ಮ ಹೆಸರಿನಲ್ಲಿ ಯಾವುದೇ ಕಾರು ಹೊಂದಿಲ್ಲ. ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ  ಪ್ರಮಾಣ ಪತ್ರದಲ್ಲಿ ಮಹಾರಾಷ್ಟ್ರ ಸಿಎಂ ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ರಾಜ್ಯ ವಿಧಾನ ಪರಿಷತ್  ಚುನಾವಣೆಯಲ್ಲಿ ಉದ್ದವ್ ಠಾಕ್ರೆ ಸ್ಪರ್ಥಿಸುತ್ತಿದ್ದಾರೆ. ಇದು ಅವರ ಮೊದಲ ಚುನಾವಣೆಯಾಗಿದೆ.  15 ಕೋಟಿ ರೂಪಾಯಿ ಸಾಲ ಇರುವ ಮಾಹಿತಿಯನ್ನು ಉದ್ದವ್ ಠಾಕ್ರೆ ಬಹಿರಂಗಪಡಿಸಿದ್ದಾರೆ.  ಇದೇ ವೇಳೆ ತಮ್ಮ ಇಬ್ಬರು ಮಕ್ಕಳು ತಮ್ಮ ಮೇಲೆ ಅವಲಂಬಿತರಾಗಿಲ್ಲ ಎಂದು ಅವರು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ. ತಮ್ಮ ಪತ್ನಿ ಹಾಗೂ ಸಾಮ್ನಾ ಪತ್ರಿಕೆಯ ಸಂಪಾದಕರಾಗಿರುವ ರಶ್ಮಿ ಠಾಕ್ರೆಯ ಸಂಪತ್ತಿನ ಕುರಿತು ಅವರು ಪ್ರಮಾಣಪತ್ರದಲ್ಲಿ  ಪ್ರಸ್ತಾಪಿಸಿದ್ದಾರೆ. ಪತ್ನಿಗೆ ಅವರದ್ದೇ ಆದ ಆದಾಯ ಮೂಲಗಳಿವೆ ಎಂದು ಉದ್ದವ್ ಠಾಕ್ರೆ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!