Saturday, November 26, 2022

ಆನ್’ಲೈನ್ ಕೋರ್ಸ್ ಆರಂಭಕ್ಕೆ ದೇಶದ 38 ವಿವಿಗಳಿಗೆ ಯುಜಿಸಿ ಅನುಮತಿ

Follow Us

newsics.com

ನವದೆಹಲಿ: ಆನ್‌ಲೈನ್ ಕೋರ್ಸ್‌ಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವುದಕ್ಕೆ ದೇಶದ 38 ವಿಶ್ವವಿದ್ಯಾಲಯಗಳಿಗೆ, ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ಅನುಮತಿ ನೀಡಿದೆ.

ಯುಜಿಸಿಯ ದೂರ ಶಿಕ್ಷಣ ನಿರ್ದೇಶನಾಲಯದ ಶಿಫಾರಸಿನ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಜಿಸಿ ಶನಿವಾರ ತಿಳಿಸಿದೆ. ಈ ವಿಶ್ವವಿದ್ಯಾಲಯಗಳು ಯುಜಿಸಿಯಿಂದ ಪೂರ್ವಾನುಮತಿ ಪಡೆಯದೆಯೇ ತಮ್ಮ ವ್ಯಾಪ್ತಿಯಲ್ಲಿನ ವಿಷಯಗಳಿಗೆ ಸಂಬಂಧಿಸಿದಂತೆ ಆನ್‌ಲೈನ್‌ ಕೋರ್ಸ್‌ನ್ನು ಪ್ರಾರಂಭಿಸಬಹುದಾಗಿದೆ. 38 ವಿಶ್ವವಿದ್ಯಾಲಯಗಳಲ್ಲಿ 15 ಡೀಮ್ಡ್‌ ವಿವಿಗಳು, 13 ರಾಜ್ಯ ವಿವಿಗಳು, 3 ಕೇಂದ್ರೀಯ ವಿವಿಗಳು ಮತ್ತು 7 ಖಾಸಗಿ ವಿವಿಗಳು ಸೇರಿವೆ.

ದೇಶದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಲಾಕ್‌ಡೌನ್ ಆಗಿ ಶಾಲಾ–ಕಾಲೇಜು ತರಗತಿಗಳು ಬಹುತೇಕ ಸ್ಥಗಿತಗೊಂಡಿದ್ದವು. ಇದರಿಂದ ಆನ್‌ಲೈನ್ ತರಗತಿಗಳು ಅನಿವಾರ್ಯವಾಗಿದೆ. ಹೀಗಾಗಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಕೆಲ ಶಿಕ್ಷಣ ಸಂಸ್ಥೆಗಳು ಇದೀಗ ಸಂಪೂರ್ಣ ಆನ್‌ಲೈನ್‌ ಕೋರ್ಸ್‌ಗಳನ್ನೇ ಆರಂಭಿಸಲು ಮುಂದಾಗಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!