newsics.com
ದೆಹಲಿ : 18 ವರ್ಷಕ್ಕಿಂತ ಮೇಲ್ಪಟ್ಟ ಜನತೆಗೆ ಕೋವಿಡ್ ಬೂಸ್ಟರ್ ಡೋಸ್ ನಡುವಿನ ಅಂತರವನ್ನು ಕಡಿಮೆ ಮಾಡಿ ಕೇಂದ್ರ ಆರೋಗ್ಯ ಸಚಿವಾಲಯವು ಪ್ರಕಟಣೆ ಹೊರಡಿಸಿದೆ. ಈ ಹಿಂದೆ 9 ತಿಂಗಳು ಇದ್ದ ಅಂತರವನ್ನು ಆರು ತಿಂಗಳುಗಳಿಗೆ ಇಳಿಕೆ ಮಾಡಲಾಗಿದೆ.
ವೈಜ್ಞಾನಿಕ ಪುರಾವೆಗಳನ್ನು ಆಧರಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.