newsics.com
ಇಂದೋರ್: ಭಾರತದಲ್ಲಿ ಅವಿವಾಹಿತ ಮಹಿಳೆಯರು ಕೇವಲ ಮೋಜಿಗಾಗಿ ಪುರುಷರೊಂದಿಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್’ನ ಇಂದೋರ್ ಪೀಠ ಹೇಳಿದೆ.
ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್ ಅವರ ಪೀಠ ಈ ತೀರ್ಪು ನೀಡಿದೆ.
ಭಾರತವು ಸಮಾಜವಾದಿ ಸಂಪ್ರದಾಯವನ್ನು ಅಳವಡಿಸಿಕೊಂಡಿದೆ. ಅವಿವಾಹಿತ ಹುಡುಗಿಯರು ಮದುವೆಯಾಗುವ ಭರವಸೆ ನೀಡುವವರೆಗೂ ಪುರುಷನೊಂದಿಗೆ ದೈಹಿಕ ಸಂಪರ್ಕವನ್ನು ಹೊಂದುವುದಿಲ್ಲ. ಹಾಗೊಂದು ವೇಳೆ ದೈಹಿಕ ಸಂಪರ್ಕವಾದರೆ ಪುರುಷ ಅದರ ಪರಿಣಾಮಗಳನ್ನು ಎದುರಿಸಲು ಸಿದ್ಧವಾಗಿರಬೇಕು ಎಂದು ತೀರ್ಪಿನಲ್ಲಿ ಹೇಳಿದೆ. ವಿವಾಹದ ನೆಪದಲ್ಲಿ ಅತ್ಯಾಚಾರ ಎಸಗಿದ ಪ್ರಕರಣವೊಂದರ ವಿಚಾರಣೆ ವೇಳೆ ಈ ತೀರ್ಪು ನೀಡಿದ್ದಾರೆ.