Thursday, December 8, 2022

4 ವರ್ಷದ ಬಾಲಕಿ ಮೇಲೆ ಡಿಜಿಟಲ್ ರೇಪ್

Follow Us

newsics.com

ನವದೆಹಲಿ: ನಾಲ್ಕು ವರ್ಷದ ಬಾಲಕಿ ಮೇಲೆ ಶಾಲೆಯಲ್ಲಿ ಡಿಜಿಟಲ್ ಅತ್ಯಾಚಾರ ಎಸಗಲಾಗಿದೆ.

ಬಾಲಕಿ ಡಿಜಿಟಲ್ ಅತ್ಯಾಚಾರದ ಬಗ್ಗೆ ತನ್ನ ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ. ಬದಲಾಗಿ ಬಾಲಕಿ ತನ್ನ ದೇಹದಲ್ಲಿ ತುರಿಕೆ ಎಂದು ಹೇಳಿದ್ದಳು. ಆಗ ಪೋಷಕರು ವೈದ್ಯರ ಬಳಿ ಕರೆದೊಯ್ದಾಗ ಬಾಲಕಿ ಘಟನೆಯನ್ನು ವಿವರಿಸಿದ್ದಾಳೆ.

ತನ್ನ ಮಗಳ ಮೇಲೆ ಸೆಪ್ಟೆಂಬರ್ 7 ರಂದು ಶಾಲೆಯಲ್ಲಿ ಡಿಜಿಟಲ್ ಅತ್ಯಾಚಾರ ನಡೆದಿದೆ. ಶಾಲೆಯ ಬಾತ್ ರೂಂನಲ್ಲಿ ಯುವಕನೊಬ್ಬ ತನ್ನ ಮಗಳೊಂದಿಗೆ ಡಿಜಿಟಲ್ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿದ ಪೊಲಿಸರು ಸೆಪ್ಟೆಂಬರ್ 7ರ ಶಾಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಅಂದು ಬಾಲಕಿ ಶಾಲೆಯ ಶೌಚಾಲಯಕ್ಕೆ ಹೋಗುತ್ತಿರುವುದು ಸೆರೆಯಾಗಿದ್ದು, ಸ್ವಲ್ಪ ಸಮಯದ ನಂತರ ಹೊರಗೆ ಬಂದಿದ್ದಾಳೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಎರಡನೇ ವ್ಯಕ್ತಿ ಕಾಣಿಸುತ್ತಿಲ್ಲ. ಸದ್ಯ ಪೊಲೀಸರು ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನೀಡಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಪರಿಚಿತ ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏನಿದು ಡಿಜಿಟಲ್ ರೇಪ್?: ಮಹಿಳೆಯ ಒಪ್ಪಿಗೆಯಿಲ್ಲದೆ ಯಾವುದೇ ಪುರುಷ ಬೆರಳು ಮತ್ತು ಹೆಬ್ಬೆರಳಿನಿಂದ ಆಕೆಯ ಖಾಸಗಿ ಅಂಗವನ್ನು ಸ್ಪರ್ಶಿಸಿದರೆ ಅದನ್ನು ಡಿಜಿಟಲ್ ರೇಪ್ ಎಂದು ಕರೆಯಲಾಗುತ್ತದೆ.

60 ವರ್ಷದ ವ್ಯಕ್ತಿಯ ಮರ್ಮಾಂಗ ಕತ್ತರಿಸಿದ ಪ್ರಿಯತಮೆ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!