newsics.com
ಉತ್ತರ ಪ್ರದೇಶ: ಪತ್ನಿ ಚಿಕನ್ ಸಾರು ಮಾಡಿ ಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಜಾನ್ಸಿ ಜಿಲ್ಲೆಯಲ್ಲಿ ನಡಡೆದಿದೆ.
ಮೃತ ವ್ಯಕ್ತಿಯನ್ನು ಪವನ್ ಎಂದು ಗುರುತಿಸಲಾಗಿದ್ದು, ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಜಾನ್ಸಿಯ ಪ್ರೇಮನಗರ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ.
ಈಗಾಗಲೇ ಮನೆಯಲ್ಲಿ ಅಡಿಗೆ ಸಿದ್ಧವಾಗಿದೆ. ಮತ್ತೆ ಚಿಕನ್ ಸಾರು ಮಾಡೋಕೆ ಸಾಧ್ಯವಿಲ್ಲ ಎಂದು ಆಕೆ ನಿರಾಕರಿಸಿದ್ದಾಳೆ. ಇದರ ಬೆನ್ನಲ್ಲಿಯೇ ಇಬ್ಬರ ನಡುವೆ ಸಣ್ಣ ಗಲಾಟೆಯಾಗಿದೆ. ಆದರೆ, ಮನನೊಂದಿದ್ದ ಗಂಡ ಕೋಣೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಶವವನ್ನು ಕುಣಿಕೆಯಿಂದ ತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.