newsics.com
ನವದೆಹಲಿ: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಆಪರೇಷನ್ ಹಸ್ತಕ್ಕೆ ಚಾಲನೆ ನೀಡಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡದ ಸಾರಿಗೆ ಸಚಿವ ಯಶಪಾಲ್ ಆರ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರ್ಯ ಅವರು ಕಾಂಗ್ರೆಸ್ ಸೇರಿದ್ದಾರೆ.
ಅವರ ಮಗ ಹಾಗೂ ಶಾಸಕರಾಗಿ ಆಯ್ಕೆಯಾಗಿರುವ ಸಂಜೀವ ಆರ್ಯ ಕೂಡ ಕಾಂಗ್ರೆಸ್ ಸೇರಿದ್ದಾರೆ. ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಇದು ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕರ್ನಾಟಕದಲ್ಲಿ ಕೂಡ ಮುಂದಿನ ದಿನಗಳಲ್ಲಿ ಇದೇ ರೀತಿಯ ಬೆಳವಣಿಗೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.